Welcome to the world of Karnataka State Souharda Federal Cooperative Ltd, the first Apex Body of New generation cooperatives in India. Souharda Federal Cooperative is a democratically elected self-regulatory organization of the cooperatives registered under Karnataka Souharda Sahakari Act, 1997.

Read More...

India is celebrating centenary celebration of Cooperative Law. The first Cooperative Law of India The Cooperative Credit Societies Act, 1904 was passed on 25th March 1904.


Read More...

ಧ್ಯೇಯ ಮತ್ತು ಉದ್ದೇಶಗಳು

ಸಂಯುಕ್ತ ಸಹಕಾರಿಯ ಧ್ಯೇಯ ಮತ್ತು ಉದ್ದೇಶಗಳು ಈ ಕೆಳಗಿನಂತೆ ಇರತಕ್ಕದ್ದು:

  1. ಸಂಯುಕ್ತ ಸಹಕಾರಿಯ ಪ್ರಾಥಮಿಕ ಉದ್ದೇಶವು ಕಾಯ್ದೆಯ ೫೩.೭ ನೇ ಕಲಂನಲ್ಲಿ ಸೂಚಿಸಿರುವ ಈ ಕೆಳಕಂಡ ಜವಾಬ್ದಾರಿಗಳನ್ನು ನಿರ್ವಹಿಸುವುದು.
  2. ಸಹಕಾರಿಗಳನ್ನು ಪ್ರವರ್ತಿಸುವುದು, ಸಂಘಟಿಸುವುದು ಹಾಗೂ ಈ ಉದ್ದೇಶಕ್ಕಾಗಿ ಮಾದರಿ ಉಪವಿಧಿಗಳನ್ನು ರಚಿಸುವುದು, ಹಾಗೂ ಸಹಕಾರಿ ತತ್ವಗಳಿಗನುಸಾರವಾಗಿ ಸಹಕಾರಿಗಳಿಗಾಗಿ ವಿವಿಧ ಕಾರ್ಯನೀತಿಯನ್ನು ರಚಿಸಲು ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸುವುದು.
  3. ಸಹಕಾರ ತರಬೇತಿ, ಶಿಕ್ಷಣ ಹಾಗೂ ತಿಳುವಳಿಕೆ ನೀಡುವುದು ಮತ್ತು ಸಹಕಾರ ತತ್ವಗಳನ್ನು ಪ್ರಚಾರ ಮಾಡುವುದು.
  4. ಸಂಶೋಧನೆ ಹಾಗೂ ಮೌಲ್ಯಮಾಪನವನ್ನು ಕೈಗೊಳ್ಳುವುದು ಮತ್ತು ಸದಸ್ಯ ಸಹಕಾರಿಗಳಿಗಾಗಿ ಯಥಾದೃಷ್ಟಿ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸಲು ನೆರವಾಗುವುದು.
  5. ಸದಸ್ಯ ಸಹಕಾರಿಗಳ ನಡುವೆ ಸೌಹಾರ್ದ ಸಂಬಂಧವನ್ನು ಕಲ್ಪಿಸುವುದು.
  6. ಅನರ್ಹಗೊಂಡ ಒಂದು ಸಹಕಾರಿಯ ನಿರ್ದೇಶಕನನ್ನು ತೆಗೆದು ಹಾಕುವುದು.
  7. ಅಗತ್ಯವಿರುವಾಗ ಸದಸ್ಯ ಸಹಕಾರಿಗಳ ಮಂಡಳಿ ಸಭೆಗಳಲ್ಲಿ ಭಾಗವಹಿಸುವುದೂ ಸೇರಿದಂತೆ ಸದಸ್ಯ ಸಹಕಾರಿಗಳಿಗೆ ವ್ಯವಸ್ಥಾಪನಾ ಅಭಿವೃದ್ಧಿ ಸೇವೆಗಳನ್ನು ಕಲ್ಪಿಸುವುದು.
  8. ಸದಸ್ಯ ಸಹಕಾರಿಗಳಿಗೆ ನೀತಿ ಸಂಹಿತೆಯನ್ನು ರೂಪಿಸುವುದು.
  9. ಸದಸ್ಯ ಸಹಕಾರಿಗಳಿಗೆ ಆರ್ಥಿಕ ಸಬಲತೆಯ ಮಾನದಂಡಗಳನ್ನು ರೂಪಿಸುವುದು.
  10. ಸದಸ್ಯ ಸಹಕಾರಿಗಳಿಗೆ ಕಾನೂನು ನೆರವು ಹಾಗೂ ಸಲಹೆ ಸೂಚನೆ ಒದಗಿಸುವುದು.
  11. ಸದಸ್ಯ ಸಹಕಾರಿಗಳ ಅಗತ್ಯದ ಮೇರೆಗೆ ಯಾವುದೇ ಇತರ ಸೇವೆಗಳನ್ನು ಒದಗಿಸುವುದು.
  12. ಹೊಸ ರೂಪದ ಸಹಕಾರಿ ಉದ್ದಿಮೆಗಳನ್ನು ಉತ್ತೇಜಿಸುವುದು.
  13. ಸಹಕಾರಿ ಶಿಕ್ಷಣ ನಿಧಿಯನ್ನು ರಚಿಸಿ ನಿರ್ವಹಿಸುವುದು.
  14. ಸಹಕಾರಿ ವಿಚಾರಧಾರೆಯನ್ನು ಅನ್ವಯಿಸುವಂತೆ ಪ್ರಾಯೋಗಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು.
  15. ಸಹಕಾರಿಗಳ ಪರವಾಗಿ ಮತ್ತು ಸಹಕಾರಿಗಳ ಮಧ್ಯೆ ಪರಸ್ಪರ ಸಂಪರ್ಕ ಕಲ್ಪಿಸುವುದು.
  16. ಸಹಕಾರಿಗಳ ಅಂಕಿ-ಅಂಶಗಳ ಬ್ಯಾಂಕಿನಂತೆ ವರ್ತಿಸುವುದು.
  17. ಸದಸ್ಯ ಸಹಕಾರಿಗಳ ಹಿತಾಸಕ್ತಿಯನ್ನು ಪ್ರತಿನಿಧಿಸುವುದು.
  18. ಗೊತ್ತುಪಡಿಸಿದ ಅವಧಿಯೊಳಗಾಗಿ ಅದರ ಸದಸ್ಯ ಸಹಕಾರಿಗಳ ಲೆಕ್ಕ ಪರಿಶೋಧನೆ, ಚುನಾವಣೆಗಳು, ಸಾಮಾನ್ಯ ಸಭೆಗಳು ನಡೆಯುವುದನ್ನು ಖಚಿತಪಡಿಸಿಕೊಳ್ಳುವುದು.
  19. ಸದಸ್ಯ ಸಹಕಾರಿಗಳ ಪರವಾಗಿ ವ್ಯವಹಾರ ಹಾಗೂ ಸೇವೆಗಳನ್ನು ಕೈಗೊಳ್ಳುವುದು.
  20. ಕಾಯ್ದೆ ಕಲಂ ೩೦.೨ ರಡಿಯಲ್ಲಿ ಒಂದು ಸದಸ್ಯ ಸಹಕಾರಿಯು ನಡೆಸಲು ತಪ್ಪಿದ ವಿಶೇಷ ಸಾಮಾನ್ಯ ಸಭೆಯನ್ನು ನಡೆಸುವುದು.
  21. ಲೆಕ್ಕ ಪರಿಶೋಧಕರ ಹಾಗೂ ಚಾರ್ಟೆರ್ಡ್ ಅಕೌಂಟೆಂಟರ ಒಂದು ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿಗಾಗಿ ಅದನ್ನು ಸದಸ್ಯ ಸಹಕಾರಿಗಳಿಗೆ ಕಳಿಸುವುದು.
  22. ಕಾಯ್ದೆ ಕಲಂ ೩೫ ರಡಿ ವಿಚಾರಣೆ ನಡೆಸುವುದು ಅಥವಾ ವಿಚಾರಣೆ ನಡೆಸುವಂತೆ ಮಾಡುವುದು.
  23. ಸದಸ್ಯ ಸಹಕಾರಿಗಳ ಪರಿವೀಕ್ಷಣೆ, ಸಮಾಪನೆ ಹಾಗೂ ಮಂಡಳಿಯ ರದ್ದತಿಗೆ ಅಧಿಕಾರ ಹೊಂದಿರುವುದು.
  24. ಕಾಯ್ದೆಯ ೬೭ನೇ ಕಲಂನಲ್ಲಿ ತಿಳಿಸಿರುವ ಸಹಕಾರಿ ತತ್ವಗಳನ್ನು ಪ್ರಚುರಪಡಿಸುವುದು ಮತ್ತು ಸದಸ್ಯ ಸಹಕಾರಿಗಳಿಗೆ ಅನ್ವಯಗೊಳಿಸುವುದು.
  25. ಕಾಯ್ದೆಯ ೧೦.೨.೨೧ ನೇ ಕಲಂನಡಿ ತಿಳಿಸಿರುವ ಸಹಕಾರಿ ಶಿಕ್ಷಣ ನಿಧಿಯನ್ನು ನಿರ್ವಹಿಸುವುದು ಹಾಗೂ ಕಲ್ಯಾಣ ನಿಧಿಯನ್ನು ನಿರ್ವಹಿಸಲು ಸದಸ್ಯ ಸಹಕಾರಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡುವುದು.
  26. ಕಾಯ್ದೆಯ ೬೨.೨ನೇ ಕಲಂನಡಿ ತಿಳಿಸಿರುವ ಸಂಯುಕ್ತ ಸಹಕಾರಿಯ ನಿಧಿಯನ್ನು ರಚಿಸಿ ನಿರ್ವಹಿಸುವುದು.
  27. ಇತರೆ ರಾಜ್ಯಗಳಲ್ಲಿರುವ ಸಂಯುಕ್ತ ಸಹಕಾರಿಗಳೊಂದಿಗೆ ಮತ್ತು ಇತರ ಸಂಸ್ಥೆಗಳೊಂದಿಗೆ ಸಂಪರ್ಕಿಸುವುದು, ಸಹಯೋಗಿಸುವುದು ಮತ್ತು ಸೂಕ್ತ ರೀತಿಯಲ್ಲಿ ಸಹಭಾಗಿತ್ವವನ್ನು ನಿರ್ವಹಿಸುವುದು.
  28. ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಶೋಧನೆ, ಚರ್ಚಾಗೋಷ್ಠಿಗಳು, ಪ್ರಕಟಣಾ ಕಾರ್ಯ, ಮುಂತಾದ ಚಟುವಟಿಕೆಗಳಿಗೆ ಸಹಕರಿಸುವುದು ಮತ್ತು ಪಾಲ್ಗೊಳ್ಳುವುದು.
  29. ಸದಸ್ಯ ಸಂಸ್ಥೆಯ ಚಟುವಟಿಕೆಗಳ ಮೇಲೆ ನಿಯಂತ್ರಣ ಅಥವಾ ನಿರ್ದೇಶನದ ಅಧಿಕಾರವುಳ್ಳ ಅಧಿಕಾರಿಗಳ ಮತ್ತು ಸಂಸ್ಥೆಗಳೊಡನೆ ಸಂಪರ್ಕಿಸುವುದು ಮತ್ತು ಸಹಯೋಗಿಸುವುದು.
  30. ಮೇಲ್ಕಂಡ ಉದ್ದೇಶಗಳಿಗೆ ಅನುಗುಣವಾಗುವಂತೆ ಎಲ್ಲಾ ಸೂಕ್ತ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವುದು.

The basic guidelines for the formation of Co-operatives under Karnataka Souharda Sahakri Act, 1997 are as follows:

  • Promoters meeting
  • Collecting initial share capital
  • Registration
  • Election to first Board
  • Beginning of activities
Read More...

All rights Reserved ©Souharda.coop.